ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಳೆ ಅವಾಂತರಕ್ಕೆ ಬೆಂಗಳೂರಿನಲ್ಲಿ ಓರ್ವ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ, ಮಣ್ಣಿನ ಕುಸಿತದಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಈ ದುರ್ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸಂಭವಿಸಿದೆ