ಉಡುಪಿ : ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು. ಜೊತೆಗೆ ಬಿಜೆಪಿ ಹಿರಿಯ ನಾಯಕರಿಂದಲೂ ಕೂಡ ಮನವರಿಸುವ ಯತ್ನ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ಸ್ಪರ್ಧೆಗೆ ಇಳಿದಿದ್ದರು. ಈ ಹಿನ್ನಲೆ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.