ಅರ್ಜೆಂಟೀನಾ: ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಮುಂತಾದ ಸೌಂದರ್ಯ ಸ್ಪರ್ಧೆದಲ್ಲಿ ಹದಿಹರೆಯದ ಸುರಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ 60 ನೇ ವಯಸ್ಸಿನಲ್ಲೂ ಯುವತಿಯರೇ ನಾಚುವಂತೆ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. 60 ನೇ ವಯಸ್ಸಿನಲ್ಲೂ ಈಕೆಯ ಸೌಂದರ್ಯ ಕಂಡು ಪ್ರೇಕ್ಷಕರು ಶಾಕ್ ಆಗಿದ್ದಾರೆ.
ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಮಹಿಳೆ ವಿಜೇತರಾಗಿ ಜಗತ್ತಿನ ಗಮನಸೆಳೆದಿದ್ದಾರೆ. ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತ, ಅಲೆಜಾಂಡ್ರಾ ತನ್ನ 60 ನೇ ವಯಸ್ಸಿನಲ್ಲಿ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯನ್ನು ಗೆದ್ದ ಮೊದಲ ಮಹಿಳೆ ಎಂಬ ದಾಖಲೆಯನ್ನೂ ಪಡೆದಿದ್ದಾರೆ.