ಕಲ್ಕತ್ತಾ: ನ್ಯಾಯಮೂರ್ತಿ ಕೃಷ್ಣರಾವ್ ನೇತೃತ್ವದ ಏಕಸದಸ್ಯ ಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ಆದೇಶವನ್ನು ನೀಡಿತು. ಆಗಸ್ಟ್ 14 ರವರೆಗೆ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ದೀದೀ ಮತ್ತು ಇತರ ತೃಣಮೂಲ ಕಾಂಗ್ರೆಸ್ ನಾಯಕರನ್ನು ನಿರ್ಬಂಧಿಸಿದೆ.
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ಹೇರಿದೆ.
ಮುಖ್ಯಮಂತ್ರಿ ಹಾಗೂ ಇಬ್ಬರು ಟಿಎಂಸಿ ಶಾಸಕರ ವಿರುದ್ಧ ಸಿವಿ ಆನಂದ ಬೋಸ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ಅರ್ಜಿ ಸಲ್ಲಿಸಿದ ನಂತರ ಹೈಕೋರ್ಟ್ ತೀರ್ಪು ನೀಡಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಗವರ್ನರ್ ಸಿವಿ ಆನಂದ ಬೋಸ್ ವಿರುದ್ಧ “ಯಾವುದೇ ಮಾನಹಾನಿಕರ ಅಥವಾ ತಪ್ಪು ಹೇಳಿಕೆ” ನೀಡುವುದಕ್ಕೆ ತಡೆ ನೀಡಲಾಗಿದೆ.