ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ನಂತರ, ಫಿಟ್ ಇಂಡಿಯಾ ಆಂದೋಲನದ ಅಡಿಯಲ್ಲಿ ಎಲ್ಲಾ ವರ್ಗಗಳ ಜನರು ಈ ಉಪಕ್ರಮವನ್ನು ಬೆಂಬಲಿಸಿದ್ದಾರೆ. ಚಿತ್ರರಂಗದ ತಾರೆಯರೆನ್ನದೆ ಕ್ರೀಡಾಪಟುಗಳು ಮತ್ತು ಆರೋಗ್ಯ ಕ್ಷೇತ್ರದ ಸಾಧಾಕರು ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಪ್ರಧಾನಿಯವರ ಸಂದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಡೆಹ್ರಾಡೂನ್‌ನಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಸ್ಥೂಲಕಾಯತೆ ಮತ್ತು ಮಧುಮೇಹ ಮತ್ತು ಹೃದ್ರೋಗಗಳಂತಹ ಸಂಬಂಧಿತ ಕಾಯಿಲೆಗಳ ಹೆಚ್ಚುತ್ತಿರುವ ಸಮಸ್ಯೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದರು. ಈ ಕಾಯಿಲೆಗಳ ವಿರುದ್ಧ ಹೋರಾಡಲು ಜನರು ತಮ್ಮ ದಿನಚರಿಯಲ್ಲಿ ಕೆಲವು ದೈಹಿಕ ಚಟುವಟಿಕೆಗಳನ್ನು ಸೇರಿಸಿಕೊಳ್ಳಲು ಸಲಹೆ ನೀಡಿದ್ದರು.