ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಹೊಡೆದು ಮೂವರು ಮ್ರತಪಟ್ಟರು. ಯಶ್ ಗದಗ ಸೂರಣಗಿ ಗ್ರಾಮಕ್ಕ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕಳೆದ ರಾತ್ರಿ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ನಿಂದ ಯಶ್ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ತನ್ನಹುಟ್ಟುಹಬ್ಬದ ದಿನ ಕಟೌಟ್ ಕಟ್ಟುವಾಗ ಮೂವರು ಅಭಿಮಾನಿಗಳು ನಿಧನರಾದ ಘಟನೆ ತೀವ್ರ ನೋವುಂಟು ಮಾಡಿದೆ. ಬ್ಯಾನರ್ ಹಾಕೋದು ಕಟೌಟ್ ಕಟ್ಟೊದು , ಈ ರೀತಿ ಮಾಡಬೇಡಿ ಎಂದು ಅಭಿಮಾನಿಗಳಿಗೆ ಯಶ್ ಕಿವಿಮಾತು ಹೇಳಿದ್ದಾರೆ. ” ನನ್ನ ಮೇಲೆ ಪ್ರೀತಿ ಇದ್ದರೆ ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದು ಹೇಳಿದ್ದು, ಮನೆ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಏನು ನೆರವು ಬೇಕೋ ಅದನ್ನು ಮಾಡುತ್ತೇನೆ” ಎಂದು ಹೇಳಿದರು.