ಅಬುಧಾಬಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು.
ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು.
ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಈ ದೇಶಕ್ಕೆ ಭೇಟಿ ನೀಡುವುದು ನನಗೆ ಎರಡನೇ ಮನೆಗೆ ಬಂದಂತೆ ಭಾಸವಾಗುತ್ತದೆ ಎಂದು ಮೋದಿ ಹೇಳಿದರು.
