ಮಾಸ್ಕೋ : ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿರುವ ಕಾರಣದಿಂದ ಭಾರತದ ಮೇಲೆ ಟ್ರಂಪ್ ಸುಂಕ ಯುದ್ಧ ಪ್ರಾರಂಭಿಸುವುದರ ನಡುವೆ ಈ ಭೇಟಿ ಮಹತ್ವದಾಗಿದೆ.
ಭಾರತವು ರಷ್ಯಾದ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಆಮದಿನ ಮೇಲೆ ಹೆಚ್ಚಿನ ಸುಂಕವನ್ನು ಘೋಷಿಸಿದ ಒಂದು ದಿನದ ನಂತರ ಮಾಸ್ಕೋದಲ್ಲಿ ನಡೆದ ಈ ದ್ವಿಪಕ್ಷೀಯ ಭದ್ರತಾ ಮಾತುಕತೆಯು, ಎರಡೂ ದೇಶಗಳು “ಕಾರ್ಯತಂತ್ರದ ಪಾಲುದಾರಿಕೆ”ಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದವು.