ಕರ್ನಾಟಕ : ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ (Uttara Kannada), ಉಡುಪಿ (Udupi) ಹಾಗೂ ದಕ್ಷಿಣ ಕನ್ನಡದಲ್ಲಿ (Dakshina Kannada) ಭಾರೀ ಮಳೆ ಸುರಿಯುತ್ತಿದೆ.
ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆ ಹಾಗೂ ಕಾಲೇಜ್ಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಅಂದರೆ ಸೋಮವಾರ ಶಾಲೆಗಳಿಗೆ ಬಿಇಒ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.