ನವದೆಹಲಿ: ರಾಹುಲ್ ಗಾಂಧಿ ಅವರು ಅಮೇಥಿಯ ಬದಲು ರಾಯ್ ಬರೇಲಿಯಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ದಾರೋ ಮತ್, ಭಾಗೋ ಮತ್’ ಎಂದು ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದರೆ, ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಅಮೇಥಿಯಿಂದ ಕಾಂಗ್ರೆಸ್ ನಾಯಕ ‘ಓಡಿಹೋಗಿದ್ದಾರೆ’ ಎಂದು ಆರೋಪಿಸಿದ್ದರು.
ಈ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, ಚೆಸ್ ಮತ್ತು ರಾಜಕೀಯದ ಅನುಭವಿ ಆಟಗಾರನಾಗಿ ರಾಯ್ ಬರೇಲಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ಚೆನ್ನಾಗಿ ಯೋಚಿಚಿ, ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.