ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 18ನೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ವಿಪಕ್ಷಗಳ ಐಎನ್ಡಿಐಎ ಒಕ್ಕೂಟ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ತಿಳಿಸಿದರು.