ಟಿ20 ವಿಶ್ವಕಪ್ ಫೈನಲ್ನಲ್ಲಿ (T20 World Cup Final) ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನ ಸೋಲಿಸಿ 13 ವರ್ಷಗಳ ಬಳಿಕ ಐಸಿಸಿ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ.
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ 125 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.
ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ (Team India) ಚಾಂಪಿಯನ್ ಪಟ್ಟ ಅಲಂಕರಿಸಿದೆ.