ದೆಹಲಿ : ‘ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಸಾವಿರಾರು ವೇರ್ ಹೌಸ್ ಮತ್ತು ಗೋದಾಮುಗಳು ಬರಲಿವೆ ಎಂದು ಹೇಳಿದ್ದಾರೆ.
ದೆಹಲಿಯ ಭಾರತ್ ಮಂಟಪದಲ್ಲಿBharat Mandapam ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳಿಗೆ ಚಾಲನೆ ನೀಡಿದ ಮೋದಿ, 700 ಲಕ್ಷ ಮೆಟ್ರಿಕ್ ಟನ್‌ಗಳ ವಿಶ್ವದ ಅತಿದೊಡ್ಡ ಸಂಗ್ರಹಣಾ ಯೋಜನೆಯನ್ನು ಮುಂದಿನ ಐದು ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗೋಡೌನ್‌ಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಮತ್ತು ದೇಶಾದ್ಯಂತ 18 ಸಾವಿರ ಪಿಎಸಿಎಸ್‌ಗಳಲ್ಲಿ ಗಣಕೀಕರಣದ ಯೋಜನೆಗಾಗಿ ದೇಶಾದ್ಯಂತ ಹೆಚ್ಚುವರಿ 500 ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಗೆ (ಪಿಎಸಿಎಸ್) ಶಂಕುಸ್ಥಾಪನೆ ಮಾಡಿದ್ದಾರೆ.