ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಮಂಗಳೂರಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ.