ಮಂಗಳೂರು : ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.
ಈ ಬಗ್ಗೆ ನಿರ್ಲಕ್ಷ್ಯ ತೋರಿದ ಕೆಲ ಖಾಸಗಿ ಶಾಲೆಗಳು ರಜೆ ದಿನವೂ ಶಾಲೆ ನಡೆಸಿರುವ ಬಗ್ಗೆ ವಿದ್ಯಾರ್ಥಿಗಳೇ ಈ ಬಗ್ಗೆ ದೂರು ಕೊಟ್ಟಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಈ ಎಲ್ಲಾ ಶಾಲೆಗಳಿಗೆ ನೋಟಿಸ್ ನೀಡಿದೆ.
