ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಎನ್‌ಡಿಎ ಸರ್ಕಾರದ ಮಹತ್ವದ ನಿರ್ಧಾರಗಳಲ್ಲಿ ಒಂದಾದ ಮಹಿಳಾ ಮೀಸಲಾತಿ ಮತ್ತು ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ (Delimitation Bill Copy) ಸಂಸತ್‌ನಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ.
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ವಿಷಯಗಳನ್ನು ಒಂದೇ ಮಸೂದೆಯನ್ನಾಗಿ ಮಾಡಿದ್ದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ.
ಲೋಕಸಭೆಯ ಮೇಲೆ ಲಕ್ಷಾಂತರ ಭಾರತೀಯ ಮಹಿಳೆಯರ ನಿರೀಕ್ಷೆಗಳಿವೆ. ಕೇಂದ್ರ ಸರ್ಕಾರ ಇಂದು ಮೇಲ್ಮನೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿ ಮತ ಚಲಾಯಿಸುವಂತೆ ರಾಜಕೀಯ ಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ಸಂಸದರಿಗೆ ಮಹತ್ವದ ಮನವಿ ಮಾಡಿದ್ದಾರೆ.
