ಶಿಮ್ಲಾ, : ಸೋನಿಯಾ ಗಾಂಧಿ ಅವರ ಆರೋಗ್ಯ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜ್ (ಐಜಿಎಂಸಿ) ಆಸ್ಪತ್ರೆಗೆ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಅವರ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಪ್ರಸ್ತುತ, ತಜ್ಞ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.