ಹತ್ರಾಸ್ : ಉತ್ತರ ಪ್ರದೇಶದ ಹತ್ರಾಸ್ನ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 116 ಭಕ್ತರು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡಿದ್ದಾರೆ.
ಡ್ಯೂಟಿಯಲ್ಲಿದ್ದ ರಜನೀಶ್ ಎಂಬ ಪೊಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಹೆಣಗಳ ರಾಶಿ ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರು ಅವಘರ್ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್ಟಿ) ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು.
ಹತ್ರಾಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.