ವಿಜಯನಗರ : ತುಂಗಭದ್ರಾ ಆಣೆಕಟ್ಟಿನ ಗೇಟ್ ನಂ.19ರಲ್ಲಿ ಚೈನ್ ಲಿಂಕ್ ತುಂಡಾಗಿದೆ. ತುಂಗಭದ್ರಾ ಅಣೆಕಟ್ಟಿನ ಮೇಲಿರುವ ಅಧಿಕಾರಿಗಳ ಕಚೇರಿಯಲ್ಲಿ ಟಿ.ಬಿ. ಬೋರ್ಡ್ ಅಧಿಕಾರಿಗಳು ಕರ್ತವ್ಯದಲ್ಲಿ ನಿರತರಾಗಿದ್ದರು.
ರಾತ್ರಿ 11:10ರ ವೇಳೆ ವಿಚಿತ್ರವಾದ ಶಬ್ದ ಕೇಳಿದೆ. ತಕ್ಷಣವೇ ಅಧಿಕಾರಿಗಳು ಪರಿಶೀಲಿಸಿದಾಗ ಗೇಟ್ ನಂ.19 ಚೈನ್ ಲಿಂಕ್ ಕಟ್ ಆಗಿದ್ದು, ಗೇಟ್ ನಂ.19 ರಿಂದ ಅಂದಾಜು 35000 ಕ್ಯೂಸೆಕ್ ನೀರು ಹರಿದು ನದಿ ಸೇರುತ್ತಿದೆ.
ಸದ್ಯ ಎಲ್ಲಾ 33 ಗೇಟ್ಗಳನ್ನು ತೆರೆಯಲಾಗಿದ್ದು, ಸುಮಾರು 1 ಲಕ್ಷ ಕ್ಯುಸೆಕ್ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.