ವಯನಾಡ್ : ಕೇರಳದ 20 ವರ್ಷದ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿ ಜೆಎಸ್ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ 20 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿಗೆ 29 ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಉಲ್ಲೇಖನೀಯ. ಪ್ರಕರಣ ತೀವ್ರಗೊಂಡ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಿಬಿಐ ತನಿಖೆ ನಡೆಸುವ ಭರವಸೆ ನೀಡಿದ್ದರು.
ಕೇರಳದ ವಯನಾಡ್‌ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಡಪಂಥೀಯ ವಿದ್ಯಾರ್ಥಿ ಮುಖಂಡರು ವಿದ್ಯಾರ್ಥಿಯನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಂದಿಸುವ ಮೂಲಕ ಆತ್ಮಹತ್ಯೆಗೆ ಪ್ರೇರೇಪಿಸಿರುವುದಾಗಿ ಎಂದು ಆರೋಪಿಸಿದರು. ಹಾಸ್ಟೆಲ್ ಬಾತ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿಗೆ 29 ಗಂಟೆಗಳ ಕಾಲ ನಿರಂತರವಾಗಿ ಚಿತ್ರಹಿಂಸೆ ನೀಡಲಾಗಿತ್ತು. ಈ ವೇಳೆ ಶಾಲಾ ಆಡಳಿತ ಮಂಡಳಿ ರ್ಯಾಗಿಂಗ್ ಆರೋಪದ ಮೇಲೆ 12 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡು ಕಾಲೇಜಿನಿಂದ ಅಮಾನತುಗೊಳಿಸಿದೆ.