ಚೆನ್ನೈ: ಎಲೆಕ್ಷನ್ ಕಿಂಗ್ (Election King) ಎಂದೇ ಹೆಸರಾಗಿರುವ ತಮಿಳುನಾಡಿನ ಕೆ ಪದ್ಮರಾಜನ್ 35 ವರ್ಷಗಳಿಂದ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.
ಅವರು ಇದುವರೆಗೆ 238 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ವಿಶೇಷವೆಂದರೆ ಅವರು ಒಮ್ಮೆಯೂ ಗೆಲುವು ಸಾಧಿಸಿಲ್ಲ. ಅವರು ರಾಷ್ಟ್ರಪತಿ, ಸಂಸದ, ಶಾಸಕ ಸ್ಥಾನಗಳಷ್ಟೇ ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಸ್ಪರ್ಧಿಸಿ ಸೋತು ದಾಖಲೆ ಸೃಷ್ಟಿಸಿದ್ದಾರೆ. ವಿಶ್ವದಲ್ಲಿಯೇ ಅತಿ ಹೆಚ್ಚು ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಎಂಬ ಲಿಮ್ಕಾ ದಾಖಲೆ ನಿರ್ಮಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ. 65 ವರ್ಷದ ಕೆ. ಪದ್ಮರಾಜನ್ 1988 ರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸದ್ಯ ಅವರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.