ಕೊಲ್ಕತ್ತಾ: ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಮತ್ತು ನಾಳೆ (ಭಾನುವಾರ) ತೀವ್ರ ಚಂಡಮಾರುತದ ಎಚ್ಚರಿಕೆ ನೀಡಿದೆ.
ಚಂಡಮಾರುತ ಭಾನುವಾರ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಚಂಡಮಾರುತವು ನಾಳೆ (ಮೇ 26) ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೆಮಲ್’ ಚಂಡಮಾರುತದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನದಿಂದ 21 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು.
ಕೋಲ್ಕತ್ತಾ , ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದ ಮೇಲೆ ರೆಮಲ್ ಚಂಡಮಾರುತದ ಪ್ರಭಾವ ಹೆಚ್ಚಾಗಲಿದೆ. ಮೇ 26ರಂದು ಮಧ್ಯಾಹ್ನ 12 ಗಂಟೆಯಿಂದ ಮೇ 27ರ 9 ಗಂಟೆಯವರೆಗೆ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.