ಕೋಲಾರ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ 327 ಮಹಿಳೆಯರು ಮೃತ ಪಟ್ಟಿದ್ದಾರೆ.
ಬಳ್ಳಾರಿಯಲ್ಲಾದ ಬಾಣಂತಿಯರ ಸಾವಿನ ಪ್ರಕರಣ ಕುರಿತು ಭಾರೀ ಚರ್ಚೆ ಆಗುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವರು ಇದು ನಮ್ಮ ವೈಪಲ್ಯದಿಂದಾಗಿದೆ ಎಂದಿದ್ದಾರೆ.
ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣದ ಕುರಿತು ಕೋಲಾರದ ಮುಳಬಾಗಿಲು ತಾಲೂಕಿನಲ್ಲಿ ಮಾತನಾಡಿರುವ ದಿನೇಶ್ ಗುಂಡೂರಾವ್, ಈ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ತಯಾರಿಕಾ ಘಟಕಕ್ಕೆ ನಮ್ಮ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ವ್ಯವಸ್ತೆ ಸರಿಪಡಿಸಲು ಪುಡ್ ಅಂಡ್ ಡ್ರಗ್ ಕಂಟ್ರೋಲ್ ಗೆ ಐ.ಎ.ಎಸ್ ಅಧಿಕಾರಿ ನೇಮಿಸುತ್ತೇವೆ. ಸಾವಿನ ಕುರಿತು ಆಡಿಟ್ ಮಾಡಿಸ್ತೇವೆ. ಮಹಿಳೆಯರ ಸಾವಿನ ತನಿಖೆಗಾಗಿ ಆರೋಗ್ಯ ಇಲಾಖೆಯ ಸಮಿತಿ ರಚನೆ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.