ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಅಂತಿಮ ಮುದ್ರೆ ಒತ್ತಿದ್ದಾರೆ. ಒಪ್ಪಂದದ ಅನ್ವಯ ಭಾರತೀಯ ಆಮದುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ ಶೇಕಡಾ 18 ಕ್ಕೆ ಗಣನೀಯವಾಗಿ ಇಳಿಸಲು ನಿರ್ಧರಿಸಲಾಗಿದೆ.
ಬೆಲೆ ಇಳಿಕೆಯಾಗಲಿರುವ ಪ್ರಮುಖ ವಸ್ತುಗಳು: ಅಮೆರಿಕದಿಂದ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುವ ಹಲವಾರು ಉತ್ಪನ್ನಗಳ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ
ಕೃಷಿ ಮತ್ತು ಡೈರಿ ವಲಯಕ್ಕೆ ವಿಶೇಷ ರಕ್ಷಣೆ: ಈ ಐತಿಹಾಸಿಕ ಒಪ್ಪಂದದ ಕುರಿತು ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಪ್ರಧಾನಿ ಮೋದಿಯವರು ಭಾರತದ ರೈತರು, ಪಶುಸಂಗೋಪನೆ ಮತ್ತು ಡೈರಿ ಉದ್ಯಮದ ಹಿತಾಸಕ್ತಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ರತ್ನ ಮತ್ತು ಆಭರಣ ರಫ್ತು ಕ್ಷೇತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸ್ಪರ್ಧಾತ್ಮಕತೆಯನ್ನು ಪಡೆಯಲಿದೆ.
ಟೆಕ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಲಾಭ: ತಂತ್ರಜ್ಞಾನದ ವಿಷಯಕ್ಕೆ ಬಂದರೆ, ಅಮೆರಿಕದಿಂದ ಆಮದಾಗುವ ಲ್ಯಾಪ್‌ಟಾಪ್‌ಗಳು, ಗ್ಯಾಜೆಟ್‌ಗಳು ಮತ್ತು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳು ಭಾರತೀಯ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಲಿವೆ.
