ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಗುದೈಬಿಯಾ ಅರಮನೆಯಲ್ಲಿ ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಎಂ.ಎ. ಅವರನ್ನು ಭೇಟಿಯಾದರು.
ಪ್ರಸ್ತುತ ಯುದ್ಧ ಸಂದರ್ಭಗಳಲ್ಲಿ ಎಲ್ಲರಿಗೂ ಆಹಾರ ಭದ್ರತೆಯನ್ನು ಒದಗಿಸಲು ಬಹರೇನ್ ರಾಜ ಹಿಸ್ ಮೆಜೆಸ್ಟಿ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರ ನಿರ್ದೇಶನಗಳಿಗೆ ಅನುಗುಣವಾಗಿ, ರಾಜ್ಯದ ಮಾರುಕಟ್ಟೆಗಳ ಸ್ಥಿರತೆ ಮತ್ತು ಸೇವೆಗಳ ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಮೂಹಿಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಅಲ್ ಖಲೀಫಾರವರು ದೃಢಪಡಿಸಿದರು. ಅಲ್ಲದೆ , ನಾಗರಿಕರು ಮತ್ತು ನಿವಾಸಿಗಳಿಗೆ ಅಗತ್ಯ ಗ್ರಾಹಕ ವಸ್ತುಗಳನ್ನು ನಿರ್ವಿಘ್ನವಾಗಿ ಪೂರೈಸಲು ಸಕಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಖಚಿತಪಡಿಸಿದರು.

ಬಹ್ರೇನ್‌ನ ಆಹಾರ ಭದ್ರತಾ ವ್ಯವಸ್ಥೆಯನ್ನು ಬೆಂಬಲಿಸುವಲ್ಲಿ ಮತ್ತು ರಾಷ್ಟ್ರೀಯ ಆರ್ಥಿಕತೆಯ ಬಲವನ್ನು ಹೆಚ್ಚಿಸುವಲ್ಲಿ ಪ್ರಮುಖ ಆಧಾರಸ್ತಂಭವಾಗಿರುವ ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ವಲಯದ ನಡುವಿನ ಏಕೀಕರಣವನ್ನು ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಗಳು ಸ್ಪಷ್ಟ ಪಡಿಸಿದರು. ಈ ಸಹಯೋಗವು ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಬೆಂಬಲಿಸುವಲ್ಲಿ ಖಾಸಗಿ ವಲಯವು ವಹಿಸಿದ ಪ್ರಮುಖ ಪಾತ್ರವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.
ಅಲ್ಲದೆ , ಮಾರುಕಟ್ಟೆ ಪರಿಸ್ಥಿತಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ, ಮೇಲ್ವಿಚಾರಣೆಯನ್ನು ಬಲಪಡಿಸುವಲ್ಲಿ ಮತ್ತು ಸಂಬಂಧಿತ ಪಾಲುದಾರರೊಂದಿಗೆ ಸಮನ್ವಯವನ್ನು ಹೆಚ್ಚಿಸುವಲ್ಲಿ ಹಾಗೂ ಖಾಸಗಿ ವಲಯದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅಧಿಕಾರಿಗಳ ನಿರಂತರ ಪ್ರಯತ್ನಗಳನ್ನು ಹಿಸ್ ರಾಯಲ್ ಹೈನೆಸ್ ಶ್ಲಾಘಿಸಿದರು.

ಈ ಪ್ರಯತ್ನಗಳು ಸರಕುಗಳ ಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಬೆಲೆ ಸ್ಥಿರತೆಯನ್ನು ಕಾಪಾಡಿಕೊಳ್ಳಲು, ದೈನಂದಿನ ಗ್ರಾಹಕರ ಅಗತ್ಯಗಳನ್ನು ಪೂರೈಸಲು ಮತ್ತು ಗ್ರಾಹಕರ ವಿಶ್ವಾಸವನ್ನು ಬಲಪಡಿಸಲು ಕೊಡುಗೆ ನೀಡುತ್ತವೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ವಿಶೇಷವಾಗಿ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ ಮತ್ತು ಗ್ರಾಹಕ ವಸ್ತುಗಳ ಪೂರೈಕೆಯನ್ನು ಭದ್ರಪಡಿಸಿಕೊಳ್ಳುವಲ್ಲಿ ಲುಲು ಗ್ರೂಪ್ ಇಂಟರ್ನ್ಯಾಷನಲ್ ನೀಡಿದ ಕೊಡುಗೆಯನ್ನು ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಅಲ್ ಖಲೀಫರವರು ಶ್ಲಾಘಿಸಿದರು.
