ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ (Lokayukta) ಅಧಿಕಾರಿಗಳು ಬೇಟೆಯಾಡಿದ್ದಾರೆ.
ಬೆಂಗಳೂರು (Bengaluru), ದೇವನಹಳ್ಳಿ, ರಾಮನಗರ, ಬಳ್ಳಾರಿ, ಮಂಡ್ಯ ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದರು. 6 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಅಕ್ರಮ ಸಂಪತ್ತಿನ ರಾಶಿಯೇ ಸಿಕ್ಕಿದೆ.
ಓರ್ವ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು (Gram Panchayat member), ಆತನ ಮನೆಯಲ್ಲಿ 25 ಕೋಟಿ ರೂಪಾಯಿ ಆಸ್ತಿ ಪತ್ತೆಯಾಗಿದೆ. ಇನ್ನು ಲೋಕಾಯುಕ್ತ ದಾಳಿಯಲ್ಲಿ ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ, ಐಶಾರಾಮಿ ವಸ್ತುಗಳು, ಮನೆ, ಜಮೀನಿನ ದಾಖಲೆ ಪತ್ರಗಳು ಪತ್ತೆಯಾಗಿವೆ.