ಶಿಮ್ಲಾ : ಶುಕ್ರವಾರ ನಡೆದ ಹಿಮಾಚಲ ಪ್ರದೇಶ ಸಚಿವ ಸಂಪುಟ ಸಭೆಯಲ್ಲಿ ಇನ್ಮುಂದೆ ಈ ರಾಜ್ಯದಲ್ಲಿ ಕೇವಲ 21 ವರ್ಷ ದಾಟಿದ ಹೆಣ್ಮಕ್ಕಳಷ್ಟೇ ಮದುವೆಯಾಗಬಹುದು ಎಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹುಡುಗಿಯ ಮದುವೆಯ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಅಂಗೀಕರಿಸಿತು. ಇಂತಹ ಪರಿಸ್ಥಿತಿಯಲ್ಲಿ ಕನಿಷ್ಠ ವಯೋಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ.