ಬೆಂಗಳೂರು: ಬಿಜೆಪಿಯಲ್ಲಿ ಲೋಕಸಭಾ ಚುನಾವಣೆಯ (Loksabha Election 2024) ಟಿಕೆಟ್ ಕಗ್ಗಂಟು ಉಂಟಾಗಿದ್ದು, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳ (Karnataka BJP Candidates) ಹೆಸರು ಘೋಷಣೆ ಆಗಿಲ್ಲ. ಸೋಮವಾರ ಈ ಸಂಬಂಧ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹೈಕಮಾಂಡ್ (BJP High Command) ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Former CM Basavaraj Bommai) ಅವರಿಗೂ ಬರುವಂತೆ ಸಂದೇಶ ಕಳುಹಿಸಿರೋ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೋಮವಾರ ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸದ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ಬೆಂಗಳೂರಿನಲ್ಲಿದ್ದು, ನಾಳೆ ದೆಹಲಿಗೆ ತೆರಳಲಿದ್ದಾರೆ. ಯಡಿಯೂರಪ್ಪ ಅವರ ಜೊತೆಯಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕೂಡ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ದೆಹಲಿಯಲ್ಲಿಯೇ ಇದ್ದಾರೆ.