ಬೆಂಗಳೂರು : ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ (Prof. Govinda Rao) ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಡಾ. ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ.
ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
19 ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ.ಪುರುಷೋತ್ತ ಬಿಳಿ ಮಲೆ ಅಧ್ಯಕ್ಷರಾದರೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.