ಸ್ಯಾಂಡಲ್ವುಡ್ ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ.
ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ ವಿಶ್ರಾಂತಿ ಇಲ್ಲದೆ ನಡೆದಿದ ಹಿನ್ನೆಲೆ ನಟ ಶಿವರಾಜ್‌ಕುಮಾರ್ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗದಲ್ಲಿ ನಿರಂತರವಾಗಿ ಸಭೆ ನಡೆಸಿದ ಗೀತಾ ಶಿವರಾಜ್‌ಕುಮಾರ್ ಬೀದಿಗಿಳಿದು ಪ್ರಚಾರ ನಡೆಸುತ್ತಿದ್ದಾರೆ. ಹಂತ ಹಂತವಾಗಿ ಕ್ಯಾಂಪೇನ್ ನಡೆಸಲಾಗ್ತಿದೆ. ಮೊದಲ ಹಂತದ ಚುನಾವಣಾ ಪ್ರಚಾರ ಮುಗಿಸಿ ಶಿವರಾಜ್‌ಕುಮಾರ್ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಈ ವೇಳೆ ಶಿವಣ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಆಗಿದೆ.