ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್ಗೆ (Poonam Mahajan) ಟಿಕೆಟ್ ನೀಡಿಲ್ಲ. 26/11ರ ಮುಂಬೈ ದಾಳಿಯ (Mumbai Attack) ಉಗ್ರ ಅಜ್ಮಲ್ ಕಸಬ್‌ನನ್ನು (Ajmal Kasab) ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ (Ujjwal Nikam) ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.
ಉಜ್ವಲ್ ನಿಕಮ್ ದೇಶದ ಅತ್ಯಂತ ಪ್ರಸಿದ್ಧ ಸರ್ಕಾರಿ ವಕೀಲರಲ್ಲಿ ಒಬ್ಬರಾಗಿದ್ದರು. ಅವರು ಭಯೋತ್ಪಾದಕ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ಸಂಬಂಧಪಟ್ಟಂತೆ ವಾದ ಮಂಡಿಸಿದ್ದು, 1993 ರ ಸರಣಿ ಬಾಂಬ್ ಸ್ಫೋಟ, ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ ಮತ್ತು ಪ್ರಮೋದ್ ಮಹಾಜನ್ ಹತ್ಯೆಯಂಥ ಉನ್ನತ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.