ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಇದೀಗ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣಗೂ ಸಹ ಕರ್ನಾಟಕ ವಿಶೇಷ ತನಿಖಾ ದಳ (ಎಸ್ಐಟಿ) ಲುಕ್ ಔಟ್ ನೋಟಿಸ್ಜಾರಿ ಮಾಡಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳಿಂದ ವಿಚಾರಣೆಗೆ ಹಾಜರಾಗದಿದ್ದರಿಂದ ವಿದೇಶಕ್ಕೆ ಹಾರುವ ಯತ್ನ ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಸ್ಐಟಿ ಈ ಲುಕ್ಔಟ್ ಅಸ್ತ್ರ ಪ್ರಯೋಗಿಸಿದೆ. ಇದರಿಂದ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು.
ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಆಗಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಈಗಾಗಲೇ ಲುಕ್ ಔಟ್ ನೋಟೀಸ್ ಜಾರಿ ಮಾಡಿ ಬಂಧನಕ್ಕೆ ಬಲೆ ಬೀಸಿದೆ. ಈ ಮೂಲಕ ವಿಮಾನ ನಿಲ್ದಾಣ, ಭೂ ಗಡಿ ಪ್ರದೇಶ ಅಥವಾ ಬಂದರುಗಳಲ್ಲಿ ಪತ್ತೆಯಾದರೂ ಬಂಧಿಸಲು ಮುಂದಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡೇ ಕಾನೂನು ಹೋರಾಟ ನಡೆಸಿದ್ದಾರೆ