ದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಆಮ್ ಆದ್ಮಿ ಪಕ್ಷದ (AAP) ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್ ಕಿಸ್ ನೀಡಿದ ಸಿಎಂ ಕೇಜ್ರಿವಾಲ್, “ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು ಎಂದು ಹೇಳಿದ್ದಾರೆ.
ಜೂನ್ 1 ರವರೆಗೆ ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಂಧಮುಕ್ತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು ಎಂದು ಅವರು ಹೇಳಿದ್ದಾರೆ.