ಬೆಂಗಳೂರು : ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರು ಏಕೈಕ ಮಹಿಳಾ ಸಚಿವರಾಗಿದ್ದರು. ಅವರ ಅನುಭವ ಮತ್ತು ನಾಯಕತ್ವದ ಕೌಶಲ್ಯಗಳು ಅವರ ಯಶಸ್ಸಿಗೆ ಕಾರಣವಾಗಿದೆ.