ಬೆಂಗಳೂರು : ಪೋಕ್ಸೋ ಕೇಸ್ನಲ್ಲಿ (POCSO Case) ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ.
ಬಂಧನಕ್ಕೆ ತಡೆ ನೀಡಿರುವ ಕೋರ್ಟ್, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್ವೈಗೆ ಸೂಚಿಸಿದೆ. ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.