ಹೊಸದಿಲ್ಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವರಾದ ಸುರೇಶ್ ಗೋಪಿ ಹಾಗೂ ಜಾರ್ಜ್ ಕುರಿಯನ್ ಅವರೊಂದಿಗೆ ಈ ಕುರಿತಂತೆ ಮಾತುಕತೆ ಕೂಡ ನಡೆಸಿದ್ದಾರೆ