ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಂಕಿಪಾಕ್ಸ್ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳ ಚರ್ಚೆ ನಡೆಸಿದರು.
ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಚಿವರು ವಿಮಾನ ನಿಲ್ದಾಣ ಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಿ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.