ಅಮರಾವತಿ : ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಪ್ರಯೋಗಾಲಯದ ವರದಿ ದೃಢಪಡಿಸಿದೆ.
ವೈಎಸ್ಆರ್ಸಿಪಿ ಸರ್ಕಾರವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು , ತಾಳೆ ಎಣ್ಣೆ, ಮೀನಿನ ಎಣ್ಣೆ, ದನದ ಕೊಬ್ಬು ಸೇರಿದಂತೆ ಹಂದಿಯ ಕೊಬ್ಬಿನಾಂಶಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.