ಬೆಂಗಳೂರು : ಭಾರೀ ಮಳೆಯಿಂದಾಗಿ ವಾಹನ ಸವಾರರು ತೊಂದರೆಗೀಡಾಗಿದ್ದು, ಯಲಹಂಕ ವಲಯವೊಂದರಲ್ಲೇ 1030 ಮನೆಗಳೀಗೆ ನೀರು ಹರಿದು ಸಮಸ್ಯೆಗಳು ಉದ್ಭವಿಸಿದೆ.
ಯಲಹಂಕ ಕರೆಯ ಪಕ್ಕದಲ್ಲಿರುವ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕೆರೆಯ ಮಟ್ಟಕ್ಕಿಂತ ಕೆಳಗಿದ್ದು, ಕೆರೆ ಕೋಡಿ ಹೊರಹರಿವಿನಿಂದಾಗಿ ಅಪಾರ್ಟ್ಮೆಂಟ್ಗೆ ನೀರು ನುಗ್ಗಿ, ಅಪಾರ್ಟ್ಮೆಂಟ್ ಹಾಗೂ ರಸ್ತೆಯಲ್ಲಿ ನೀರು ನಿಂತಿದ್ದು, ನಿವಾಸಿಗಳನ್ನು ಸ್ಥಳಾಂತರ ಮಾಡುವುದರ ಜೊತೆಗೆ ಕುಡಿಯುವ ನೀರು ಹಾಗೂ ತಿಂಡಿ ವ್ಯವಸ್ಥೆ ಮಾಡಲಾಗಿದೆ.