ಹೈದರಾಬಾದ್‌ನಲ್ಲಿ RTC ಕ್ರಾಸ್ ರೋಡ್ ನಲ್ಲಿರೋ ಸಂಧ್ಯಾ ಥಿಯೇಟರ್ ನಲ್ಲಿ ಪ್ರದರ್ಶಿಸಲಾಯಿತು. ಈ ಥಿಯೇಟರ್ಗೆ ಅಲ್ಲು ಅರ್ಜುನ್ ಬರ್ತಾರೆ ಎಂದು ಗೊತ್ತಾಗ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಪರಿಸ್ಥಿತು ನಿಯಂತ್ರಿಸಲು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ರೇವತಿ (Revathi Death) ಎಂಬ ಮಹಿಳೆ ಸಾವನ್ನಪ್ಪಿದ್ರು.
ರೇವತಿ ಸಾವಿನ ಬಗ್ಗೆ ಮಾತಾಡಿದ ನಟ ಅಲ್ಲು ಅರ್ಜುನ್, ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಘಟನೆ ಕೇಳಿ ನನಗೂ ಆಘಾತವಾಯ್ತು. ಆ ಸುದ್ದಿಯಿಂದ ಪುಷ್ಪ ಸಿನಿಮಾ ಸಕ್ಸಸ್ ಸಂಭ್ರಮದಲ್ಲೂ ಸರಿಯಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಜನ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎಂಜಾಯ್ ಮಾಡಬೇಕೆಂಬುದು ನಮ್ಮ ಆಸೆ. ಆದ್ರೆ ಇಂತಹ ಘಟನೆ ನಡೆಯಬಾರದಿತ್ತು, ಎಂದು ತಿಳಿಸಿದರು.
ಮಹಿಳೆ ಸಾವಿನ ಬಗ್ಗೆ ನಟ ಅಲ್ಲು ಅರ್ಜುನ್ ವಿಡಿಯೋ ಮೂಲಕ ಪ್ರತ್ರಿಕ್ರಿಯಿಸಿದ್ದು, ಮಹಿಳೆಯ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ರೇವತಿ ಅವರ ಸಾವಿಗೆ ನಾನು ಸಂತಾಪ ಸೂಚಿಸುತ್ತೇನೆ. ನನ್ನ ಪರವಾಗಿ ರೇವತಿ ಅವರ ಕುಟುಂಬಕ್ಕೆ 25 ಲಕ್ಷ ರೂ. ನೀಡುವೆ. ನಮ್ಮ ತಂಡದಿಂದ ಯಾವುದೇ ಸಹಾಯವನ್ನು ನೀಡಲು ನಾವು ಸಿದ್ಧರಿದ್ದೇವೆ. ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಸದಾ ಅವರ ಜೊತೆ ಇರುತ್ತೇನೆ. ಶೀಘ್ರದಲ್ಲೇ ರೇವತಿ ಕುಟುಂಬವನ್ನು ಖುದ್ದಾಗಿ ಭೇಟಿ ಮಾಡುವುದಾಗಿ ಬನ್ನಿ ಭರವಸೆ ನೀಡಿದರು. ಅಲ್ಲು ಅರ್ಜುನ್ ಟ್ವಿಟ್ಟರ್ ನಲ್ಲಿ ವಿಡಿಯೋ ಕೂಡ ಶೇರ್ ಮಾಡಿದ್ರು.