ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು . ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು, ಬಿರುಗಾಳಿ, ಮತ್ತು ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ದೃಢ ಪಡಿಸಿದೆ .
ರಾಜ್ಯದ ಉತ್ತರ ಒಳನಾಡು, ಕರಾವಳಿ, ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ವಿಭಿನ್ನ ಎಚ್ಚರಿಕೆಗಳನ್ನು ಘೋಷಿಸಲಾಗಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಮತ್ತು ಕೊಪ್ಪಳಗಳ ಜಿಲ್ಲೆಗಳಲ್ಲಿ ಗಂಟೆಗೆ 30-50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ವಿಜಯನಗರ, ದಾವಣಗೆರೆ, ಹಾಸನ, ತುಮಕೂರು, ಮೈಸೂರು, ಮತ್ತು ಮಂಡ್ಯಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ