ಕೇರಳದಲ್ಲಿ, ಪ್ರೈಮರಿ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡು ಬಂದಿದೆ. ಈ ಮಾರಕ ಮಿದುಳಿನ ಸೋಂಕಿಗೆ ಸಂಬಂಧಿಸಿದಂತೆ 69 ದೃಢಪಡಿಸಿದ ಪ್ರಕರಣಗಳು ದಾಖಲಾಗಿದ್ದು, 19 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕಾಯಿಲೆಯನ್ನು “ಗಂಭೀರ ಸಾರ್ವಜನಿಕ ಆರೋಗ್ಯ ಕಾಳಜಿ” ಎಂದಿದ್ದಾರೆ. ಮೊದಲಿಗೆ ಕೋಳಿಕ್ಕೋಡ್ ಮತ್ತು ಮಲಪ್ಪುರಂನಂತಹ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಸೋಂಕು ಇದೀಗ ರಾಜ್ಯದ ವಿವಿಧೆಡೆ ವ್ಯಾಪಿಸಿದೆ.