ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಸಹಚರರಿಗೆ ಮತ್ತೆ ಆಗಸ್ಟ್ 14ರವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಸರಕಾರದ ಪರ ವಕೀಲರು, ಕೊಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಾಂತ್ರಿಕ ಹಾಗೂ ವೈಜ್ಞಾನಿಕ ವರದಿಗಳನ್ನು ಸಂಗ್ರಹಿಸಬೇಕು ಎಂಬುದು ಸೇರಿದಂತೆ 11 ಅಂಶಗಳನ್ನು ಉಲ್ಲೇಖಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.