ದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ 2024-25ರ ಸಾಲಿನ ಕೇಂದ್ರ ಬಜೆಟ್ನಲ್ಲಿ ಪ್ರತಿಪಕ್ಷ ಆಳ್ವಿಕೆಯ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆಯೆಂದು ಆರೋಪಿಸಲಾಗಿದೆ.
ಈ ಕಾರಣದಿಂದಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷ ನಾಯಕರು , ಇಂಡಿಯಾ ಮೈತ್ರಿಕೂಟದ ನಾಯಕರು ಸಂಸತ್ಭವನದ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಇದು ವಂಚನೆಯ ಬಜೆಟ್, ಜನವಿರೋಧಿಯಾಗಿದೆ. ಯಾರಿಗೂ ನ್ಯಾಯ ದೊರೆತಿಲ್ಲ. ವಿಶೇಷ ಸ್ಥಾನಮಾನವನ್ನು ನೀಡಿಲ್ಲ ಎಂದು ಖರ್ಗೆ ತಿಳಿಸಿದರು.
2024-25ರ ಸಾಲಿನ ಬಜೆಟ್ ಪ್ರಧಾನಿ ಮಹಾರಾಷ್ಟ್ರ ವಿರೋಧಿ ಯೋಜನೆಯಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಆರೋಪಿಸಿದರು.
ನಮ್ಮ ರಾಜ್ಯಗಳಿಗೆ ಕೇಂದ್ರ ಸರಕಾರ ಏನನ್ನೂ ನೀಡಿಲ್ಲವೆಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕ ಪ್ರಯತ್ನ ಮಾಡುತಿದ್ದರೆ ಎಂದು ವಿತ್ತ ಸಚಿವರು ಸದನದಲ್ಲಿ ಹೇಳಿದ್ದಾರೆ