ಮಂಗಳೂರು : ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್‌ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್‌ಗಳನ್ನು ಸಂಚಾರ ನಿಷೇದ ಮಾಡಿರುವುದರಿಂದಾಗಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಹಾಗು ಸಹಸ್ರಾರು ಜನರು ಸಮಸ್ಯೆಗೆ ಸಿಲುಕಿದ್ದಾರೆ, ಜನ ಜೀವನ ಅಸ್ತ ವ್ಯಸ್ಥವಾಗಿದೆ.
ಮಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವ ಸಿದ್ಧತೆಯೊಂದಿಗೆ ಘಾಟ್ ಬಗ್ಗೆ ಚಿಂತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ರಾತ್ರಿ 8ರಿಂದ ಬೆಳಗ್ಗೆ 6ರ ತನಕ ರಸ್ತೆ ನಿರ್ಬಂಧ ಮಾಡಬೇಕು. ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು . ಮಡಿಕೇರಿ ಘಾಟ್‌ನಲ್ಲಿ ನಿನ್ನೆ ಆಗಿರುವಂತಹ ಸಮಸ್ಯೆ ಮರುಕಳಿಸದಂತೆ ನಾಲ್ಕೂ ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ವ್ಯವಸ್ಥೆ ಮಾಡಬೇಕಾದುದು ಎಂದು ಸೆಲ್ವಕುಮಾರ್ ಅವರಿಗೆ ಯು.ಟಿ.ಖಾದರ್ ಆದೇಶಿಸಿದ್ದಾರೆ