ಮಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಂತಿಯುತವಾಗಿ ನಡೆಸಲು ಹಾಗು ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆ. 26 ರಿಂದ ಅ. 7ರ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
5 ಮಂದಿಗಿಂತ ಹೆಚ್ಚು ಮಂದಿ ಗುಂಪು ಸೇರಲು ಅವಕಾಶವಿಲ್ಲ. ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳೊಂದಿಗೆ ಪ್ರಯಾಣ ನಿರ್ಬಂಧಿಸಲಾಗಿದೆ.
ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಅಸಂಬಂಧಿತವಾಗಿ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ಇಲ್ಲ. ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ, ಅಶಾಂತಿಯುತ ವರ್ತನೆಗೆ ಅವಕಾಶವಿಲ್ಲ.