ಬೆಂಗಳೂರು :ರಾಜ್ಯದ್ಯಂತ ಡೆಂಗ್ಯೂ ಭೀತಿ ಹೆಚ್ಚುತಿದೆ, ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 85,270 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 11,451 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 620 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ರವಿವಾರದಂದು 478 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ 173 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 58 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 6 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಉಡುಪಿಯಲ್ಲಿ 11 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8 ಮಂದಿಗೆ ಡೆಂಗ್ಯೂದೃಢಪಟ್ಟಿದೆ.
ರಾಮನಗರದಲ್ಲಿ 52 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಗೆ ಸೇರಿದ್ದಾರೆ.