ನವದೆಹಲಿ : ಮುಂದಿನ 5 ದಿನಗಳ ಕಾಲ ದೇಶದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದ್ದು ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.