ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿಎಂದು ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ(ಪಂಚಾಯತ್ ರಾಜ್)ಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ(ಪಂಚಾಯತ್ ರಾಜ್)ಯ ಅಪಾರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ತೋಟಗಾರಿಕೆ ಇಲಾಖೆಯ ನಿರ್ದೇಶಕ ರಮೇಶ್ ಡಿ.ಎಸ್. ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಡಾ.ಅರುಂಧತಿ ಚಂದ್ರಶೇಖರ್ ಅವರನ್ನು ಮೈಸೂರಿನಲ್ಲಿರುವ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ