NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಅತ್ಯಂತ ಮಾನಸಿಕ ಆಘಾತ ಉಂಟುಮಾಡುತ್ತವೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ದೇಶದ ಅತ್ಯಂತ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆ UPSCಯಲ್ಲಿ ಇಂತಹ ಪರಿಸ್ಥಿತಿ ಎಂದಿಗೂ ಎದುರಾಗಿಲ್ಲ. ನೀವು ಅವರಿಂದ ಕಲಿಯಬೇಕು” ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದ್ದಾರೆ ಎಂದು ವರದಿಯಾಗಿದೆ.
